150
 1 ಯೆಹೋವನಿಗೆ ಸ್ತೋತ್ರವಾಗಲಿ! 
ದೇವರನ್ನು ಆತನ ಆಲಯದಲ್ಲಿ ಸ್ತುತಿಸಿರಿ! 
ಆತನ ಶಕ್ತಿಯನ್ನು ಪರಲೋಕದಲ್ಲಿ ಸ್ತುತಿಸಿರಿ! 
 2 ಆತನ ಮಹತ್ಕಾರ್ಯಗಳಿಗಾಗಿ ಆತನನ್ನು ಸ್ತುತಿಸಿರಿ! 
ಆತನ ಮಹತ್ವಕ್ಕೆ ತಕ್ಕಂತೆ ಆತನನ್ನು ಸ್ತುತಿಸಿರಿ! 
 3 ತುತ್ತೂರಿಗಳನ್ನೂ ಕೊಂಬುಗಳನ್ನೂ ಊದುತ್ತಾ ಆತನನ್ನು ಸ್ತುತಿಸಿರಿ! 
ಹಾರ್ಪ್ವಾದ್ಯಗಳನ್ನೂ ಲೈರ್ವಾದ್ಯಗಳನ್ನೂ ನುಡಿಸುತ್ತಾ ಆತನನ್ನು ಸ್ತುತಿಸಿರಿ. 
 4 ದಮ್ಮಡಿಗಳನ್ನು ಬಡಿಯುತ್ತಾ ಕುಣಿಯುತ್ತಾ ಆತನನ್ನು ಸ್ತುತಿಸಿರಿ. 
ತಂತಿವಾದ್ಯಗಳಿಂದಲೂ ಕೊಳಲುಗಳಿಂದಲೂ ಆತನನ್ನು ಸ್ತುತಿಸಿರಿ. 
 5 ತಾಳಗಳಿಂದ ಆತನನ್ನು ಸ್ತುತಿಸಿರಿ! 
ಝಲ್ಲರಿಗಳಿಂದ ಆತನನ್ನು ಸ್ತುತಿಸಿರಿ! 
 6 ಸಮಸ್ತ ಜೀವಿಗಳೇ, ಯೆಹೋವನಿಗೆ ಸ್ತೋತ್ರಮಾಡಿರಿ! 
ಯೆಹೋವನಿಗೆ ಸ್ತೋತ್ರವಾಗಲಿ!